ಬಂಟ್ವಾಳ: ಚುನಾವಣೆ ಕರ್ತವ್ಯದಲ್ಲಿದ್ದ ಗ್ರಾ.ಪಂ. ಕಾರ್ಯದರ್ಶಿಯ ಮೃತದೇಹ ನದಿಯಲ್ಲಿ ಪತ್ತೆ

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿಯ ಮೃತದೇಹ ಧರ್ಮಸ್ಥಳ ಬಳಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ.
ಅಮ್ಟಾಡಿ ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಎಂಬವರೇ ಶಂಕಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದವರು.
ಅಮ್ಟಾಡಿ ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಅವರು ಕಳೆದ ಆರು ದಿನಗಳ ಹಿಂದೆ ದಿಢೀರನೇ ನಾಪತ್ತೆಯಾಗಿದ್ದರು. ಇದೀಗ ಅವರು ಧರ್ಮಸ್ಥಳ ಬಳಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾರೆ.

ಚುನಾವಣಾ ಕರ್ತವ್ಯದಲ್ಲಿದ್ದ ಇವರು, ಮಾ.27ರಂದು ಕರ್ತವ್ಯಕ್ಕೆ ಹಾಜರಾಗದೆ ಏಕಾಏಕಿ ನಾಪತ್ತೆಯಾಗಿದ್ದರು. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆಗಿಳಿದಾಗ ಲಕ್ಷ್ಮೀನಾರಾಯಣ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಚುನಾವಣೆ ಕರ್ತವ್ಯದ ಎಸ್ ಎಸ್ ಟಿ ತಂಡದಲ್ಲಿದ್ದ ಇವರು ಅದಕ್ಕೂ ಮೊದಲು ಒಂದು ಬಾರಿ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರು.
ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Latest Indian news

Popular Stories