ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

ಮಂಗಳೂರು: ನಗರದ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ.

ಕಾರ್ಕಳ ನಿವಾಸಿ ರಂಜಿತಾ (28) ಆತ್ಮಹತ್ಯೆ ಮಾಡಿಕೊಂಡ ಬಾಣಂತಿ.

ರಂಜಿತಾ ಹೆರಿಗೆಗೆಂದು ಲೇಡಿಗೋಷನ್ ಆಸ್ಪತ್ರೆಗೆ ದಾಖಲಾಗಿದ್ದರು. ಅಕ್ಟೋಬರ್ 30ರಂದು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಹೆರಿಗೆಯಾಗಿತ್ತು. ಎನ್‌ಐಸಿಯುಗೆ ದಾಖಲಾಗಿದ್ದ ಶಿಶು ನ.3ರಂದು ಮೃತಪಟ್ಟಿತ್ತು.

ಬಾಣಂತಿ ರಂಜಿತಾ ಗುಣಮುಖರಾಗಿದ್ದರಿಂದ ಸೋಮವಾರ ಡಿಸ್ಚಾರ್ಜ್‌ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ರಂಜಿತಾ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆಂದು ಆಸ್ಪತ್ರೆಯ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.

Latest Indian news

Popular Stories