ಬೆಳ್ತಂಗಡಿ: ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಸರಕಾರಿ ಜಾಗದ ಒತ್ತುವರಿ ಪರಿಶೀಲಿಸಲು ತೆರಳಿದ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕು ತಹಶಿಲ್ದಾರ್ ಪೃಥ್ವಿ ಸಾನಿಕಂ ಗುರುವಾರ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ, ಪರಿಶೀಲನೆಗಾಗಿ ಕಂದಾಯ ನಿರೀಕ್ಷಕರು , ಗ್ರಾಮ ಅಭಿವೃದ್ದಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ತೆರಳಿದ್ದರು.

ಈ ವೇಳೆ ಅಲ್ಲಿದ್ದ ನಾಸೀರ್‌ ಮತ್ತು ರೌಫ್‌ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಲು ಪ್ರಯತ್ನಿಸಿರುತ್ತಾರೆ ಹಾಗೂ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿರುತ್ತಾರೆ ಎಂದು ತಹಶೀಲ್ದಾರ್ ದೂರು ನೀಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 03/2024 ಕಲಂ: 353, 504 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Latest Indian news

Popular Stories