ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಕಾರು ಹೊರತೆಗೆಯುವಾಗ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು

ಬೆಳ್ತಂಗಡಿ : ಮನೆಯ ಅಂಗಳದಲ್ಲಿ ಕಾರು ಹೊರತೆಗೆಯುವಾಗ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ನವಾಫ್ ಇಸ್ಮಾಯಿಲ್ (10) ಮೃತ ಬಾಲಕ.

ಮನೆಯ ಅಂಗಳದಲ್ಲಿದ್ದ ಕಾರನ್ನು ತೆಗೆಯುವ ವೇಳೆ ಆಕಸ್ಮಿಕವಾಗಿ ಬಾಲಕ ಕಾರಿನಡಿಗೆ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories