Dakshina KannadaCrime

ಬೆಳ್ತಂಗಡಿ | ರಿಕ್ಷಾ ಪಲ್ಟಿ – ವಿದ್ಯಾರ್ಥಿಗಳು ಸೇಫ್

ಸೋಮವಾರ ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ಪಲ್ಟಿಯಾದ ಪರಿಣಾಮ ಒಂಬತ್ತು ಶಾಲಾ ಮಕ್ಕಳಿಗೆ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೂಡಡ್ಕದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಒಂಬತ್ತು ವಿದ್ಯಾರ್ಥಿಗಳನ್ನು ಕಲ್ಲೇರಿ ಕಡೆಯಿಂದ ಹೊತ್ತೊಯ್ಯುತ್ತಿದ್ದ ಆಟೋ ರಿಕ್ಷಾಕ್ಕೆ ದ್ವಿಚಕ್ರ ವಾಹನವೊಂದು ಹಠಾತ್ತನೆ ಅಡ್ಡ ಬಂದಿದೆ. ದ್ವಿಚಕ್ರ ವಾಹನ ಸವಾರನನ್ನು ರಕ್ಷಿಸಲು ಆಟೋ ರಿಕ್ಷಾ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ವಾಹನ ಪಲ್ಟಿಯಾಗಿದೆ.

ಗಾಯಗೊಂಡ ಮಕ್ಕಳಿಗೆ ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button