ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ: ಮಂಗಳೂರಿನಲ್ಲಿ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ವೂ ಗೊತ್ತಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಚಾಳಿ. ಅವರ ಹೇಳಿಕೆಯಲ್ಲಿ ಹುರುಳಿಲ್ಲ ಎಂದರು.

ನಾವು ಗ್ಯಾರೆಂಟಿಯನ್ನು ಸೇರಿಸಿ 1.20 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದೇವೆ. ಅಭಿವೃದ್ಧಿ ಶೂನ್ಯ, ಅಭಿವೃದ್ಧಿ ಶೂನ್ಯ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಡವರಿಗೆ ಆರ್ಥಿಕವಾಗಿ ಸಬಲತೆ ಕೊಡುವುದು ಅಭಿವೃದ್ಧಿಯಲ್ಲವೇ. ಈ ದೇಶಕ್ಕೆ ಬರೀ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕವಾಗಿ ಸಾಮಾಜಿಕವಾಗಿ ಸ್ವಾತಂತ್ರ್ಯ ಬಂದರೆ ಮಾತ್ರ ಸ್ವಾತಂತ್ರ್ಯ ಬಂದಂತೆ ಎಂದು ಅಂಬೇಡ್ಕರ್ ಹೇಳಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ಈ ಹಿಂದೆ ನೀರಾವರಿಗೆ 16000 ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು.

Latest Indian news

Popular Stories