ರಾಜ್ಯ ಕರಾವಳಿಯಲ್ಲಿ ಕಾರ್ಗೊ ಶಿಪ್‌ಗೆ ಬೆಂಕಿ; ಸುರತ್ಕಲ್ ಬಳಿ ನಿಂತ ಹಡಗು!

ಅತ್ಯಂತ ದಹನಕಾರಿ ತೈಲ ಹಾಗೂ ಘನ ವಸ್ತುವನ್ನು ಗುಜರಾತ್‌ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಒಯ್ಯುತ್ತಿದ್ದ ಬೃಹತ್ ಸರಕು ಹಡಗಿನಲ್ಲಿ (ಕಾರ್ಗೋ ಕಂಟೈನರ್) ಗೋವಾ -ಕಾರವಾರ ನಡುವೆ ಅರಬಿ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸತತ ಪ್ರಯತ್ನದಿಂದ ಇದೀಗ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದರೂ, ಅಪಾಯಕಾರಿ ಸ್ಥಿತಿಯಲ್ಲಿ ಈ ಹಡಗು ಸುರತ್ಕಲ್‌ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಲಂಗರು ಹಾಕಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ಈ ಹಡಗು ಮಂಗಳೂರಿನ ಎನ್‌ಎಂಪಿಟಿಗೆ ಸಮೀಪದಲ್ಲಿರುವಂತೆ ಸುರತ್ಕಲ್ ಬಳಿ ನಡು ಸಮುದ್ರದಲ್ಲಿ ನಿಂತಿದೆ. ಸದ್ಯಕ್ಕೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದ್ದರೂ, ಮತ್ತೊಮ್ಮೆ ಬೆಂಕಿ ಕಾಣಿಸಿಕೊಳ್ಳುವ, ಇದರಿಂದ ಹಡಗು ಸಂಪೂರ್ಣ ಹಾನಿಗೊಂಡು ಮುಳುಗುವ ಹಾಗೂ ಅದರಲ್ಲಿರುವ ತೈಲ ಸೋರಿಕೆಯಾಗಿ ಸಮುದ್ರ ಸೇರುವ ಅಪಾಯ ಇರುವುದರಿಂದ ಸಮುದ್ರ ಮಾಲಿನ್ಯವು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸಮುದ್ರ ತೀರದಲ್ಲಿ ವ್ಯಾಪಿಸುವ ಅಪಾಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ತಮಗೆ ಸೂಚನೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹಾಗೂ ಮಲ್ಪೆ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಎಚ್.ಎನ್ ತಿಳಿಸಿದ್ದಾರೆ.

Latest Indian news

Popular Stories