Dakshina KannadaFeatured Story

ಮೆಟ್ರೋ ದರ ಏರಿಕೆಗೆ ಕೇಂದ್ರ ಸರಕಾರವೇ ಹೊಣೆ: ಸಚಿವ ರಾಮಲಿಂಗಾ ರೆಡ್ಡಿ

ಮಂಗಳೂರು: ಮೆಟ್ರೋ ದರ ಏರಿಕೆಗೆ ಕೇಂದ್ರ ಸರಕಾರವೇ ಹೊಣೆ. ದೇಶದ ಎಲ್ಲಾ ಮೆಟ್ರೋಗಳ ನಿರ್ಮಾಣ, ನಿರ್ವಹಣೆ ಮತ್ತು ದರ ನಿಗದಿಗೆ ಸಂಬಂಧಿಸಿದ ನಿರ್ಧಾರಗಳನ್ನು ಕೇಂದ್ರ ಸರ್ಕಾರದ ನಗರ ಅಭಿವೃದ್ಧಿ ಸಚಿವಾಲಯವೇ ತೆಗೆದುಕೊಳ್ಳುತ್ತದೆ. ರಾಜ್ಯ ಸರ್ಕಾರವು ಸಬ್ಸಿಡಿ ಮೂಲಕ ಹಣವನ್ನು ನೀಡುತ್ತದೆ. ಈ ನಿರ್ಣಯಕ್ಕಾಗಿ ಕೇಂದ್ರ ಮತ್ತು ರಾಜ್ಯದ ಪ್ರತಿನಿಧಿಗಳನ್ನು ಒಳಗೊಂಡ ಕಮಿಟಿ ಇದೆ. ಆದರೆ ಅಂತಿಮ ಅಧಿಕಾರ ಕೇಂದ್ರದ್ದೇ ಎಂದು ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.

ಮಂಗಳೂರಿನ ಆರ್‌ಟಿಒ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವೇ ದರ ಏರಿಸಿದೆ. ಅದನ್ನು ಧೈರ್ಯವಾಗಿ ಒಪ್ಪಿಕೊಳ್ಳಬೇಕು. ನಾವು ರಾಜ್ಯದ ಬಸ್ ದರ ಏರಿಕೆ ಮಾಡಿದಾಗ ಅದರ ಕಾರಣಗಳನ್ನು ಸ್ಪಷ್ಟವಾಗಿ ಮಾಧ್ಯಮಗಳ ಮುಂದೆ ವಿವರಿಸಿದ್ದೇವೆ. ಬಿಜೆಪಿ ನಾಯಕರು ಯಾವುದೇ ಸಮಸ್ಯೆ ಬಂದರೆ ಕಾಂಗ್ರೆಸ್ ಮೇಲೆ ಹೊರಿಸುತ್ತಾರೆ ಎಂದು ಟೀಕಿಸಿದರು.

ಕೆಪಿಸಿಸಿ ಅಧ್ಯಕ್ಷ ಬದಲಾವಣೆ: ಮಾತನಾಡಲು ನಿರಾಕರಣೆ
ಕೆಪಿಸಿಸಿ ಅಧ್ಯಕ್ಷ ಪದವಿ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಕ್ಷದ ಹೈಕಮಾಂಡ್ ಈ ವಿಷಯದಲ್ಲಿ ಯಾರೂ ಮಾತನಾಡಬಾರದು ಎಂದು ಸೂಚಿಸಿದೆ. ಅದರಂತೆ, ನಾನು ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button