Dakshina KannadaFeatured Story

ಕೊರೋನಾ: ಗಡಿಯಲ್ಲಿ ಸಂಚಾರಕ್ಕೆ ಯಾವುದೇ ನಿರ್ಭಂದ ಇಲ್ಲ: ಡಿಎಚ್ಒ ಸ್ಪಷ್ಟನೆ

ಮಂಗಳೂರು: ಕೇರಳದಲ್ಲಿ ಕೊರೋನಾ ರೂಪಾಂತರಿತ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಹಂಚಿಕೊಳ್ಳುವ ಕೇರಳದ ಗಡಿಭಾಗಗಳಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಆದರೆ ಅಲ್ಲಿ ಸಂಚಾರಕ್ಕೆ ಯಾವುದೇ ನಿರ್ಭಂದ ವಿಧಿಸಲಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.

IMG 20231221 WA0011 Dakshina Kannada, Featured Story IMG 20231221 WA0010 Dakshina Kannada, Featured Story

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಜಿಲ್ಲೆಯ ಗಡಿಪ್ರದೇಶಗಳಾಗಿರುವ ತಲಪಾಡಿ, ಸಾರಡ್ಕ, ಸ್ವರ್ಗ(ಪಾಣಾಜೆ) , ಸುಳ್ಯ ಪದವು, ಜಾಲ್ಸೂರು ಈ ಐದು ಸ್ಥಳಗಳಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಈಗ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲೂ ಧ್ವನಿವರ್ಧಕದ ಮೂಲಕ ಜಾಗತಿ ಮೂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕೇರಳದಿಂದ ಬರುವ ವಿದ್ಯಾರ್ಥಿಗಳಲ್ಲಿ ಶೀತ, ನೆಗಡಿ, ಜ್ವರ ಅನಾರೋಗ್ಯದ ಲಕ್ಷಣಗಳು ಇದ್ದರೆ ಅವರನ್ನು ತಪಾಸಣೆಗೆ ಒಳಪಡಿಸುವಂತೆ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ. ಜಿಲ್ಲೆಯಲ್ಲಿ ಪ್ರತಿನಿತ್ಯ 100 ರ್ಯಾಪಿಡ್ ಟೆಸ್ಟ್, 221 ಆರ್‌ಟಿಪಿಸಿಆರ್ ಟೆಸ್ಟ್ ಸೇರಿದಂತೆ ಒಟ್ಟು 321 ಜನರನ್ನು ತಪಾಸಣೆಗೆ ಒಳಪಡಿಸುವಂತೆ ಗುರಿ ನಿಗದಿಯಾಗಿದೆ. 100 ಕಿಟ್‌ಗಳನ್ನು ತಾಲೂಕು ಆಸ್ಪತ್ರೆಗಳಿಗೆ ಒದಗಿಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button