ಮಂಗಳೂರು :ವಿವಾಹಿತ ಮಹಿಳೆಗೆ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿ ಬಂಧನ

ಕಾರವಾರ: ಬಣ್ಣದ ಮಾತಿನಿಂದ ಮರುಳು ಮಾಡಿ ವಿವಾಹಿತ ಮಹಿಳೆಯ ಜೊತೆ ಲೈಂಗಿಕ ಸಂಬಂಧ ಬೆಳೆಸಿ ಹಣ ಕೊಡುವಂತೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿಯನ್ನು ಕಾರವಾರದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ್ ಭಟ್ ಮಾಣಿಲ ಬಂಧಿತ ಆರೋಪಿಯಾಗಿದ್ದು ಈತ ಉತ್ತರ ಕನ್ನಡ ಜಿಲ್ಲೆಯ ವಿವಾಹಿತ ಮಹಿಳೆಗೆ ಮೋಸ ಮಾಡಿ ಲೈಂಗಿಕ ಸಂಬಂಧ ಬೆಳೆಸಿ ಬ್ಲಾಕ್ ಮೇಲ್ ಮಾಡಲು ಆರಂಭಿಸಿದ್ದ.ಈಕೆ ಸಂಗೀತದಲ್ಲಿ ಆಸಕ್ತಿ ಹೊಂದಿದ್ದಳು. ಹೀಗಾಗಿ ಈಕೆ ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹಾಡುತ್ತಿದ್ದಳು. ಈ ವೇಳೆ ಪ್ರಶಾಂತ್ ಭಟ್ ಪರಿಚಯವಾಗಿದ್ದಾನೆ. ಈ ಪರಿಚಯ ಇಬ್ಬರಲ್ಲೂ ಪ್ರೀತಿಗೆ ತಿರುಗಿದೆ.

2023ರ ಜನವರಿ ತಿಂಗಳಲ್ಲಿ ಆರೋಪಿ ಪ್ರಶಾಂತ್ ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದ. ನಂತರ ಲೈಂಗಿಕ ವಾಗಿ ಬಳಸಿಕೊಂಡಿದ್ದ.ನಂತರ ಫೆಬ್ರವರಿ ತಿಂಗಳಲ್ಲಿ ಅದೇ ಲಾಡ್ಜ್ ನಲ್ಲಿ ರೂಮ್ ಮಾಡಿ ಆಕೆಯನ್ನು ಕರೆಸಿಕೊಂಡು ಕಾಮದಾಟವಾಡಿ ಆಕೆಯ ಖಾಸಗಿ ಕ್ಷಣಗಳನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ.

ಬಳಿಕ ಮಹಿಳೆಯ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ 7 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಲ್ಲದೇ ಮಹಿಳೆಯ ತಾಯಿ ಹಾಗೂ ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ.

Latest Indian news

Popular Stories