ಮಂಗಳೂರು: ತಾನು ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯ ಬಂಧನ

ಮಂಗಳೂರು: ತಾನು ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಬಂಧಿತ. ಈತ ನಗರದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿಧ್ಯಾರ್ಥಿ. ಆರೋಪಿಯಿಂದ RAW, ಕೇರಳ ಸ್ಟೇಟ್ ಪೊಲೀಸ್ ಮತ್ತು ಅಗ್ರಿಕಲ್ಚರ್ ಡಿಪಾರ್ಟ್ಮೆಂಟ್ ಅಂಡ್ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟ್ಮೆಂಟ್ ಕೇರಳ ಹೆಸರಿನಲ್ಲಿ ನಕಲಿ ಐಡಿಗಳನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ, ಪಿಎಸ್ಐ ಸಮವಸ್ತ್ರ, ಪೊಲೀಸ್ ಲೋಗೊ, ಮೆಡಲ್, ಬೆಲ್ಟ್, ಕ್ಯಾಪ್, ಒಂದು ಲ್ಯಾಪ್‌ಟಾಪ್, ಎರಡು ಮೊಬೈಲ್ ಸೆಟ್ ಗಳನ್ನು ವಶಪಡಿಸಲಾಗಿದೆ.

ಈತನಿಂದ ವಂಚನೆಗೆ ಒಳಗಾದವರಿದ್ದರೆ, ಉರ್ವ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮನವಿ ಮಾಡಿದ್ದಾರೆ.

Latest Indian news

Popular Stories