ಸುಳ್ಯ: ಶಾಲಾ ಜಗಳಿಯಲ್ಲಿ ಯುವಕನ ಮೃತದೇಹ ಪತ್ತೆ

ಸುಳ್ಯ: ಯುವಕನೋರ್ವನ ಮೃತದೇಹ ಶಾಲೆಯೊಂದರ ಜಗಳಿಯಲ್ಲಿ ಸೋಮವಾರ ಪತ್ತೆಯಾದ ಘಟನೆ ಸುಳ್ಯದ ಕಾಂತಮಂಗಲದಲ್ಲಿ ನಡೆದಿದ್ದು, ಸಾರ್ವಜನಿಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಶಾಲಾ ಜಗಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವುದಾಗಿ ಹೇಳಲಾಗುತ್ತದೆ. ಸುಮಾರು 25 – 30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ. ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ, ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

Latest Indian news

Popular Stories