Dakshina Kannada

ದೆಹಲಿ :ಕರ್ನಾಟಕ ರಕ್ಷಣಾ ವೇದಿಕೆಯಿಂದ ನಾಳೆ ಭಾರೀ ಪ್ರತಿಭಟನೆ

ದೆಹಲಿ :ಅಕ್ಟೋಬರ್ 18ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಭಾರಿ ಪ್ರತಿಭಟನೆ ಬಳಿಕ ಹೋರಾಟಗಾರರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದು, ಮನವಿ ಪತ್ರ ಸಲ್ಲಿಸಲಿದ್ದಾರೆ
ಹೈದರಾಬಾದ್‌ನಿಂದ 300 ಜನ ದೆಹಲಿಗೆ ತೆರಳಿದ್ದು, ಕಲಬುರ್ಗಿ ಮತ್ತು ರಾಯಚೂರಿನಿಂದ ಕೂಡ ಹೋರಾಟಗಾರರು ಭಾಗವಹಿಸಲಿದ್ದಾರೆ,

ಮಂಗಳವಾರ ಬೆಂಗಳೂರಿನಿಂದ ಸುಮಾರು 700 ಮಂದಿ ದೆಹಲಿಗೆ ಹೋಗಲಿದ್ದು, ಒಟ್ಟು 2 ಸಾವಿರಕ್ಕೂ ಹೆಚ್ಚು ಮಂದಿ ಧರಣಿಯಲ್ಲಿ ಭಾಗವಹಿಸುತ್ತಾರೆ ಎಂದು ಕರವೇ ಮಾಹಿತಿ ನೀಡಿದೆ.ಪ್ರತಿಭಟನೆಯಲ್ಲಿ ಸುಮಾರು 2000 ಜನ ಭಾಗವಹಿಸಲಿದ್ದು, ಬುಧವಾರ ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ. ಮೆರವಣಿಗೆಗ ಅವಕಾಶ ನೀಡದ ಕಾರಣ ಧರಣಿ ಮಾಡಲು ನಿರ್ಧರಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button