ಮಂಗಳೂರು: ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯಾಡಳಿತ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ, ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿಯನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ಟಿಕೆಟ್ ನ ನಿರೀಕ್ಷೆಯಲ್ಲಿದ್ದ ಬಿಜೆಪಿಯ ಘಟಾನುಘಟಿ ನಾಯಕರಿಗೆ ತೀವ್ರ ನಿರಾಸೆಯಾಗಿದೆ.
ಅಕ್ಟೋಬರ್ 21ರಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನಾಮ ಪತ್ರ ಸಲ್ಲಿಕೆಗೆ ಇನ್ನು ಕೇವಲ 2 ದಿನ ಇರುವಾಗ ಈ ಅಚ್ಚರಿಯ ಬೆಳವಣಿಗೆ ನಡೆದಿದೆ.
ಈ ಸ್ಥಾನಕ್ಕಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕಟೀಲ್, ಅರುಣ್ ಕುಮಾರ್ ಪುತ್ತಿಲ ಹಾಗೂ ಉಡುಪಿಯಿಂದ ಪ್ರಮೋದ್ ಮಧ್ವರಾಜ್ ತೀವ್ರ ಲಾಭಿ ನಡೆಸಿದ್ದರೆನ್ನಲಾಗಿದೆ. ಅದಾಗ್ಯೂ ನಳಿನ್ ಕುಮಾರ್ ಕಟೀಲ್ಗೆ ಟಿಕೆಟ್ ಬಹುತೇಕ ಖಚಿತ ಎಂದು ಹೇಳಲಾಗುತ್ತಿತ್ತು. ಆದರೆ ಈ ಅನಿರೀಕ್ಷಿತ ಬೆಳವಣಿಗೆ ಮಾತ್ರ ಎಲ್ಲರನ್ನೂ ನಿರಾಸೆಗೊಳಿಸಿದೆ.