ಆಧ್ಯಾಪಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಆರೋಪ: ಮೂಡಬಿದ್ರೆ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲು

ಮಂಗಳೂರು: ಎಸೆಸೆಲ್ಸಿ ವಿದ್ಯಾರ್ಥಿಯನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಧ್ಯಾಪಕನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡಬಿದ್ರೆಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಧ್ಯಾಪಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಫೆಬ್ರವರಿ 28ರಂದು ಘಟನೆ ನಡೆದಿದೆ ಎನ್ನಲಾಗಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ಇದೀಗ ಗುರುವ ಮೊಗೇರಾ ವಿರುದ್ಧ ಮತ್ತಷ್ಟು ವಿದ್ಯಾರ್ಥಿಗಳು ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿದ್ದಾರೆ.

ಪ್ರಕರಣದ ವಿವರ: ಫೆಬ್ರವರಿ 28ರಂದು ಗುರುವ ಮೊಗೇರಾ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುವ ನೆಪದಲ್ಲಿ ತಡ ರಾತ್ರಿವರೆಗೂ ನಿಲ್ಲಿಸಿದ್ದ. ಜೊತೆಗೆ ಕೆಲ ಹುಡುಗರನ್ನೂ ನಿಲ್ಲಿಸಿದ್ದ ಎನ್ನಲಾಗಿದೆ. ಈ ವೇಳೆ ಸಂತ್ರಸ್ಥ ಬಾಲಕಿಯನ್ನು ಕೋಣೆಗೆ ಕರೆಸಿಕೊಂಡಿದ್ದ ಅಧ್ಯಾಪಕ ಅವಳ ಬಳಿ ಅನುಚಿತವಾಗಿ ವರ್ತಿಸಿದ್ದ ಎಂದು ಹೇಳಲಾಗಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಮಾ.12ರಂದು ಶಾಲೆಯ ಮುಖ್ಯೋಪಾಧ್ಯಾಯರು ದೂರು ದಾಖಲಿಸಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Latest Indian news

Popular Stories