Dakshina Kannada

ಮಾಜಿ ಶಾಸಕ ಇದಿನಬ್ಬ ಮಗನ ಮನೆಗೆ ವಿಎಚ್’ಪಿ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ; ಬಂಧನ

ಮಂಗಳೂರು: ಮಾಜಿ ಶಾಸಕ ಇದಿನಬ್ಬ ಅವರ ಮಗನ ಮನೆಗೆ ವಿಶ್ವ ಹಿಂದು ಪರಿಷತ್ ಹಾಗು ಭಜರಂಗದಳದ ಮುಖಂಡರು ಮುತ್ತಿಗೆ ಹಾಕಲು ಯತ್ನಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹಲವರನ್ನು ಮಂದಿಯನ್ನು ಬಂಧಿಸಿದರು.

ಮಂಗಳೂರಿನ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಇರುವ ಇದಿನಬ್ಬ ಪುತ್ರ ಬಿಎಂ ಭಾಷಾ ಮನೆಗೆ ವಿಶ್ವ ಹಿಂದು ಪರಿಷತ್ ಹಾಗು ಭಜರಂಗದಳದ ಮುಖಂಡರ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು 14 ಮಂದಿ ಕಾರ್ಯತರ್ತರನ್ನು ಬಂಧಿಸಿದ್ದಾರೆ.

ಇದಿನಬ್ಬ ಮಗ ಭಾಷಾ ವಿರುದ್ಧ ಲವ್ ಜಿಹಾದ್ ಆರೋಪ ಮಾಡಿದ ಕಾರ್ಯಕರ್ತರು ಭಾಷಾರ ಸೊಸೆ ಜೊತೆ ಮಾತನಾಡಲು ಹೊರಗೆ ಕಳುಹಿಸಿ ಎಂದು ಪಟ್ಟು ಹಿಡಿದಿದ್ದು, ಈ ವೇಳೆ ಮನೆಯ ಮುಂಭಾಗ ವಿಎಚ್ ಪಿ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪ್ರತಿಭಟನೆ ನಡುವೆ ಮನೆಗೆ ನುಗ್ಗುವ ಪ್ರಯತ್ನ ಮಾಡಿದ ಕಾರ್ಯಕರ್ತರು, ಇದ್ದಿನಬ್ಬರ ಮೊಮ್ಮಗ ಮಡಿಕೇರಿ ಮೂಲದ ಹಿಂದೂ ಯುವತಿಯನ್ನು ಲವ್ ಜಿಹಾದ್ ಮಾಡಿದ್ದಾರೆಂದು ಆರೋಪಿಸಿದರು.

ಬಂಟ ಸಮುದಾಯದ ಯುವತಿಯನ್ನು ಇಸ್ಲಾಂಗೆ ಮತಾಂತರಿಸಿ ಭಯೋತ್ಪಾದನಾ ಚಟುವಟಿಕೆಗೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ. ಜನಜಾಗೃತಿಗಾಗಿ ಉಳ್ಳಾಲದ ರಸ್ತೆಗಳಲ್ಲಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮೂಲಗಳ ಪ್ರಕಾರ ಮಡಿಕೇರಿ ಮೂಲದ ಬಂಟ ಸಮುದಾಯದ ಯುವತಿ ಮರಿಯಮ್ ಆಲಿಯಾಸ್ ದೀಪ್ತಿ ಮಾರ್ಲ ಎಂಬಾಕೆಯನ್ನು ಲವ್ ಜಿಹಾದ್ ನಡೆಸಿ ಅನಾಸ್ ನಿಂದ ದೀಪ್ತಿ ವಿವಾಹ ಮಾಡಲಾಗಿದೆ. ದೀಪ್ತಿ ಮಾರ್ಲ ಸೇರಿ ಇಡೀ ಕುಟುಂಬದ ವಿರುದ್ಧ ತನಿಖೆ ನಡೆಸಬೇಕು ಎಂದು ವಿಎಚ್ ಪಿ ಆಗ್ರಹಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button