Dakshina Kannada

ಏರ್ ಇಂಡಿಯಾ ಎಕ್ಸ್‌ಪ್ರೆಸ್‌‌ನೊಳಗೆ ಹರೇಕಳ ಹಾಜಬ್ಬರಿಗೆ ಗೌರವಾರ್ಪಣೆ

ಮಂಗಳೂರು: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಿಬ್ಬಂದಿಗಳು ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ವಿಮಾನದೊಳಗೆ ಗೌರವಿಸಿದ್ದಾರೆ.

ಹಿದಾಯ ಫೌಂಡೇಶನ್ ಜುಬೇಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಸನಭಾಗವಹಿಸಲು ಹರೇಕಳ ಹಾಜಬ್ಬರು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಂ ಗೆ ಪ್ರಯಾಣಿಸುತ್ತಿದ್ದರು. ಹರೇಕಳ ಹಾಜಬ್ಬರನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬಂದಿಗಳು ಕ್ಯಾಪ್ಟನ್ ನ ಗಮನಕ್ಕೆ ತಂದರು. ಆಗ ಕ್ಯಾಪ್ಟನ್, ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ “ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪಡೆದ ಹರೇಕಳ ಹಾಜಬ್ಬರು ನಮ್ಮ ವಿಮಾನ ದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು” ಎಂದರು.

ಜೊತೆಗೆ ಹಾಜಬ್ಬರನ್ನು ಮುಂಭಾಗಕ್ಕೆ ಕರೆಸಿ ಅಭಿನಂದಿಸಲಾಯಿತು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button