ಶಾಸಕರ ಮೇಲೆ ಕೇಸ್ ಹಿಂಪಡೆಯುವಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಆರು ಜನರ ವಿರುದ್ಧ ದಾಖಲಾಗಿರುವ ಪ್ರಕರಣ ಕೈ ಬಿಡುವಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಜೆರೋಸಾ ಶಾಲೆಯ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕರು ಸೇರಿದಂತೆ ಆರು ಜನರ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದರು.

ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಇಂದು ಮಂಗಳೂರು ನಗರದ ಮಿನಿ ವಿಧಾನಸೌಧ ಮುಂಭಾಗ ಸೇರಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಾಸಕರ ಮೇಲಿನ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯ್ತು. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

ಜೆರೊಸಾ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ ವೇಳೆ ಶಾಸಕರು ಅಲ್ಲಿ ಇರಲಿಲ್ಲ. ಆದರೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಇದುವರೆಗೂ ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Latest Indian news

Popular Stories