ಹಿಂದೂ ಧರ್ಮ ನನಗೆ ಸಾಮರಸ್ಯದ ಬದುಕನ್ನು ಕಲಿಸಿದೆ: ಪದ್ಮರಾಜ್

ಮಂಗಳೂರು: ಹಿಂದೂ ಧರ್ಮ ನನಗೆ ಸಾಮರಸ್ಯದ ಬದುಕನ್ನು ಕಲಿಸಿದ್ದು, ನಾನು ಅದನ್ನು ಪಾಲಿಸುತ್ತಾ ಬಂದಿದ್ದೇನೆ ಎಂದು ಮಂಗಳೂರು ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದರು.
ಅವರು ಬೈಕಂಪಾಡಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದರು.

ಹಿಂದೂ ಧರ್ಮ ಅತ್ಯುನ್ನತ ಮೌಲ್ಯಗಳನ್ನು ಕಲಿಸಿಕೊಟ್ಟಿದೆ. ನಾನು ಅದನ್ನು ಶಿರಸಾ ಪಾಲಿಸುತ್ತಿದ್ದೇನೆ ಎಂದರು.

ಬಿಜೆಪಿಯ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಜನರ ಒಲವು ಕಾಂಗ್ರೆಸ್ ನತ್ತ ಇದೆ. ಬಿಜೆಪಿಯ ಸೋಲು ಖಚಿತವಾಗುತ್ತಿದ್ದಂತೆ ಅವರು ಅಪಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ ಎಂದು ಪದ್ಮರಾಜ್ ಪೂಜಾರಿ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಜನ ಕಾಂಗ್ರೆಸ್‌ನತ್ತ ಒಲವು ತೋರಿಸುತ್ತಿದ್ದಾರೆ. ಪದ್ಮರಾಜ್ ಪೂಜಾರಿ ಜಿಲ್ಲೆಗೆ ಸೂಕ್ತ ಅಭ್ಯರ್ಥಿಯಾಗಿದ್ದು, ಬಿಜೆಪಿಯ ಭದ್ರ ಕೋಟೆ ಈ ಬಾರಿ ಛಿದ್ರವಾಗಲಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತನಾಡಿ, ಇಷ್ಟು ದಿನ ಕಾಂಗ್ರೆಸ್ ಗೆಲುವಿಗಾಗಿ ಮಾಡಿರುವ ನಮ್ಮ ಶ್ರಮ ವ್ಯರ್ಥವಾಗುವುದಿಲ್ಲ. ಪದ್ಮರಾಜ್ ಆರ್. ಪೂಜಾರಿ ಅವರು ಈ ಬಾರಿ ಗೆದ್ದು, ಜಿಲ್ಲೆಯ ಅಭಿವೃದ್ಧಿಗೆ ಮುನ್ನುಡಿ ಬರೆಯಲಿದ್ದಾರೆ ಎಂದರು.

ಪ್ರಚಾರ ಸಭೆಗೆ ಮೊದಲು ಕುಳಾಯಿಯಿಂದ ಬೈಕಂಪಾಡಿಯವರೆಗೆ ಬೃಹತ್ ರೋಡ್ ಶೋ ನಡೆಯಿತು. ಅಭ್ಯರ್ಥಿ, ಮುಖಂಡರು ತೆರೆದ ವಾಹನದಲ್ಲಿ ಸಾಗಿದರೆ, ಬೃಹತ್ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು, ಮತದಾರರು ಕಾಲ್ನಡಿಗೆಯಲ್ಲಿ ಘೋಷಣೆ ಕೂಗುತ್ತಾ, ಗ್ಯಾರೆಂಟಿ ಯೋಜನೆಯ ಫಲಕ ಪ್ರದರ್ಶಿಸುತ್ತಾ ಸಾಗಿದರು. ರೋಡ್ ಶೋಗೆ ಚೆಂಡೆ, ನಾಸಿಕ್ ಬ್ಯಾಂಡ್, ಹುಲಿ ಕುಣಿತ ರಂಗು ತುಂಬಿತು. ಬೈಕಂಪಾಡಿ ಬಳಿ ಬೃಹತ್ ಹೂಮಾಲೆಯನ್ನು ಅಭ್ಯರ್ಥಿಗೆ ಹಾಕಲಾಯಿತು.

Latest Indian news

Popular Stories