ರಾಜ್ಯದ ಸುಮಾರು 18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ನಾಳೆಯಿಂದ ಮತ್ತೆ ಮಳೆ ಆರಂಭವಾಗಲಿದೆ.ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ ಆದರೂ ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯದ ಸುಮಾರು 18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ವಿಜಯಪುರದಲ್ಲಿ 9.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ

Latest Indian news

Popular Stories