ಇನ್ನೂ ಸುಮ್ಮನಿದ್ದರೆ ಪ್ರಜಾಪ್ರಭುತ್ವ ಅವನತಿಯತ್ತ: ಮೋದಿ ವಿರುದ್ಧ ಪ್ರಕಾಶ್‌ರಾಜ್ ವಾಗ್ದಾಳಿ

ಮಂಗಳೂರು: ದೇಶದ ಜನರನ್ನು ವ್ಯವಸ್ಥಿತವಾಗಿ ಮಂಗ ಮಾಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ನಾವೆಲ್ಲಾ ಸುಮ್ಮನಿದ್ದುದಕ್ಕೆ ಇದು ಮುಂದುವರಿದಿದೆ. ಆದರೆ ಇದನ್ನು ನಾವು ಪ್ರಶ್ನಿಸದಿದ್ದಲ್ಲಿ ದೇಶ, ಪ್ರಜಾಪ್ರಭುತ್ವ ಅವನತಿಯತ್ತ ಸಾಗಲಿದೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಅವರು ನಗರದ ತೊಕ್ಕೊಟ್ಟಿನ ಯುನಿಟಿ ಮೈದಾನದಲ್ಲಿ ನಡೆದ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಹಿಂದೆ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುವ ನಾಯಕರಿದ್ದರು. ಆದರೆ ಈಗ ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕನಿದ್ದಾನೆ. ನಮ್ಮ ದೇಶದಲ್ಲಿ ಎಂಥಹ ನಾಯಕನಿದ್ದಾನೆ. ಆತ ದೇಶವನ್ನು ಹೇಗೆ ಮಂಗ ಮಾಡುತ್ತಿದ್ದಾನೆ ಅಂದರೆ‌ 2019 ರಲ್ಲಿ ಗುಹೆ ಸೇರಿಕೊಂಡ. ಈಗ ಕ್ಯಾಮರಾ ಹಿಡಿದುಕೊಂಡು ನೀರೊಳಗೆ ಸೇರಿದ್ದಾನೆ.‌ ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ.‌ ದಿನಕ್ಕೆ ಐದು ವಸ್ತ್ರ ಚೇಂಜ್ ಮಾಡುತ್ತಾನೆ ಎಂದು ಪ್ರಕಾಶ್ ರಾಜ್ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ ವಂದೇ ಭಾರತ್ ಗೆ ಬಾವುಟ ತೋರಿಸಿದಷ್ಟು ಬಾವುಟವನ್ನು ಸ್ಟೇಷನ್ ಮಾಸ್ಟರ್ ಸಹ ತೋರಿಸಿರಲಿಕ್ಕಿಲ್ಲ ಎಂದು ವ್ಯಂಗ್ಯ ಮಾಡಿದರು.

ಕಲಾವಿದನಾಗಿ ಮಾತನಾಡಬೇಕಾಗುವುದು ನನ್ನ ಜವಾಬ್ದಾರಿ. ಸಮಸ್ಯೆಗಳಾದಾಗ ಬಂದು ನಾನು ನಿಲ್ಲಬೇಕಿದೆ. ದೇಹಕ್ಕಾದ ಗಾಯಗಳು ಸುಮ್ಮನಿದ್ದರೂ ಶಮನವಾಗುತ್ತದೆ. ಆದರೆ ದೇಶಕ್ಕಾದ ಗಾಯ ನಾವು ಸುಮ್ಮನಿದ್ದಷ್ಟು ಹೆಚ್ಚಾಗುತ್ತದೆ.‌ ಒಬ್ಬ ಕಲಾವಿದ ಮೌನವಾದರೆ ಇಡೀ ಸಮಾಜ ಮೌನವಾದಂತೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟವರಲ್ಲಿ ಅಧಿಕಾರದ‌ ಶಕ್ತಿ ಇದೆ.‌‌ ಮೋದಿ‌ ಏನು ಕಿಸಿದು ಗುಡ್ಡ ಹಾಕಿದ್ದಾನೆ..?. ಪ್ರಜಾಪ್ರಭುತ್ವದಲ್ಲಿ ಸೂಕ್ಷ್ಮತೆ ಇರಬೇಕು ಎಂದು ನಟ ಪ್ರಕಾಶ್ ರೈ ಹೇಳಿದರು.

Latest Indian news

Popular Stories