ಕಡಬ: ಡೆಂಗ್ಯೂಗೆ ಯುವಕ ಮೃತ್ಯು

ಮಂಗಳೂರು: ಡೆಂಗ್ಯೂ ಮತ್ತು ಮಲೇರಿಯಾ ಜ್ವರ ವಿಪರೀತವಾದ ಹಿನ್ನೆಲೆಯಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ.

ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಎಂಬವರು ಮೃತಪಟ್ಟವರು. ಭಾನುವಾರ ಜ್ವರ ಜಾಸ್ತಿಯಾದ ಹಿನ್ನೆಲೆಯಲ್ಲಿ ಕಡಬದ ಖಾಸಗಿ ಮೆಡಿಕಲ್ ಸೆಂಟರ್‌ಗೆ ಅವರು ಚಿಕಿತ್ಸೆಗಾಗಿ ಆಗಮಿಸಿದ್ದರು.ಅಲ್ಲಿ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಜ್ವರ ಪತ್ತೆಯಾಗಿದೆ. ನಂತರದಲ್ಲಿ ಮನೆಗೆ ಬಂದ ಶಿಜು ಅವರಿಗೆ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದರು ಹೆಚ್ಚುವರಿ ಚಿಕಿತ್ಸೆಗಾಗಿ ಶಿಜು ಅವರನ್ನು ಮಂಗಳೂರಿಗೆ ಕಳುಹಿಸಿಕೊಟ್ಟರು.ಆದರೆ ಮಂಗಳೂರಿನ ಆಸ್ಪತ್ರೆಗೆ ತಲುಪಿದ ವೇಳೆಗಾಗಲೇ ಶಿಜು ಅವರು ಮೃತಪಟ್ಟಿದ್ದರು.

Latest Indian news

Popular Stories