ಜಿಲ್ಲಾಡಳಿದಿಂದ ಕಾರಣವಿಲ್ಲದೆ ಹಸ್ತಕ್ಷೇಪ:ದ.ಕನ್ನಡದ ಬಿಜೆಪಿ ಶಾಸಕರಿಂದ ಪ್ರತಿಭಟನೆ ಎಚ್ಚರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಆಡಳಿತ ವ್ಯವಸ್ಥೆಯಲ್ಲಿ ಕಾರಣವಿಲ್ಲದೆ ಹಸ್ತಕ್ಷೇಪ ಮಾಡುತ್ತಿರುವುದರಿಂದ ಶಾಸಕರ ಹಕ್ಕು ಚ್ಯುತಿಯಾಗುತ್ತಿದೆ ಎಂದು ಜಿಲ್ಲೆಯ ಬಿಜೆಪಿ ಶಾಸಕರು ಆರೋಪಿಸಿದ್ದಾರೆ.

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಪಂನ ರಾಜೀವ ಗಾಂಧಿ ಸೇವಾ ಕೇಂದ್ರ ಹಾಗೂ ಪಂಚಾಯತ್ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ತಾಪಂ ಇಒ ಮತ್ತು ಗ್ರಾಪಂ ಪಿಡಿಒರನ್ನು ಅಮಾನತು ಮಾಡಲಾಗಿದೆ. ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಪಂ ನಲ್ಲಿ ಸ್ವಚ್ಛ ಸಂಕೀರ್ಣ ಕಟ್ಟಡ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲೂ ಶಿಷ್ಠಾಚಾರ ಉಲ್ಲಂಘನೆಯಾಗಿದೆ ಎಂದು ಕಾರ್ಯಕ್ರಮ ಮುಂದೂಡಲಾಗಿದೆ.

ಇಂತಹ ಘಟನೆಗಳು ಖಂಡನೀಯ. ಮುಂದಕ್ಕೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಅಮಾನತುಗೊಂಡಿರುವ ಅಧಿಕಾರಿಗಳನ್ನು ಮೂರು ದಿನದೊಳಗೆ ಸೇವೆಗೆ ಮರು ಸೇರ್ಪಡೆಗೊಳಿಸದಿದ್ದಲ್ಲಿ ಆ.14ರಂದು ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಪ್ರತಿಭಟಿಸಲಿದ್ದೇವೆ ಎಂದು ಮಾಜಿ ಸಚಿವ, ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದ್ದಾರೆ.

ಶಾಸಕರಾದ ಉಮಾನಾಥ ಕೋಟ್ಯಾನ್, ಯು.ರಾಜೇಶ್ ನಾಯ್ಕ್, ಡಾ| ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ವಿ.ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಉಪಸ್ಥಿತರಿದ್ದರು.

Latest Indian news

Popular Stories