ಮಂಗಳೂರು: 28 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ: ಇಬ್ಬರ ಬಂಧನ

ಮಂಗಳೂರು: ಒರಿಸ್ಸಾದಿಂದ ಕೇರಳ ಹಾಗೂ ಮಂಗಳೂರಿಗೆ ಗಾಂಜಾ‌ ಸಾಗಾಟ ಮಾಡುತ್ತಿದ್ದ ತಂಡವನ್ನು ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದು 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರನ್ನು ಕೇರಳದ ವಯನಾಡು ಜಿಲ್ಲೆಯ ಅನೂಪ್ ಎಂ.ಎಸ್(28) ಮತ್ತು ಕೇರಳದ ಕಣ್ಣೂರು ಜಿಲ್ಎಯ ಲತೀಪ್ ಕೆ.ವಿ(36) ಎಂದು ಗುರುತಿಸಲಾಗಿದೆ.

ಮಂಗಳವಾರ ಮಂಗಳೂರು ನಗರಕ್ಕೆ ಒರಿಸ್ಸಾ ರಾಜ್ಯದಿಂದ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಪತ್ತೆ ಹಚ್ಚಿ ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾವನ್ನು, 3 ಮೊಬೈಲ್ ಫೋನ್ ಗಳನ್ನು, ನಗದು ರೂ. 4020/- ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಹೇಂದ್ರ ಬೊಲೆರೋ ಜೀಪು, ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 35,14,520/- ಆಗಿರುತ್ತದೆ. ಆರೋಪಿಗಳು ಒರಿಸ್ಸಾದಿಂದ ಅಂಧ್ರಪ್ರದೇಶ, ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

 

IMG 20240206 WA0072 Dakshina Kannada, Featured Story IMG 20240206 WA0073 Dakshina Kannada, Featured Story

Latest Indian news

Popular Stories