ಮಂಗಳೂರು: ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಮಂಗಳೂರಿನ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಿತೇಶ್ ರಾವ್(20) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ.

ಉಡುಪಿ ಜಿಲ್ಲೆಯ ನಿವಾಸಿಯಾಗಿರುವ ನಿತೇಶ್ ರಾವ್ ಕಳೆದ 2 ವರ್ಷಗಳಿಂದ ಮಂಗಳೂರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಇವರು ಮಂಗಳೂರಿನ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜು ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಬೆಳಗ್ಗೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿತೇಶ್ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories