ಮಂಗಳೂರು: ರಿಕ್ಷಾ ಚಾಲಕನಿಗೆ ಇರಿದು ಹಲ್ಲೆ

ಮಂಗಳೂರು: ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಆಟೊ ರಿಕ್ಷಾ ಚಾಲಕರೊಬ್ಬರಿಗೆ ಇತರ ಆಟೊ ಚಾಲಕರ ಗುಂಪು ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ತನ್ನೀರು ಬಾವಿ ಬೀಚ್ ಬಳಿ ನಡೆದಿದ್ದು, ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಬಂದರ್ ನಿವಾಸಿ ಮುಹಮ್ಮದ್ ಅರಫಾತ್ (30) ಇರಿತಕ್ಕೊಳಗಾದ ರಿಕ್ಷಾ ಚಾಲಕ. ಅರಾಫತ್ ಮಂಗಳೂರು ನಗರ ವಲಯದ ರಿಕ್ಷಾ ಚಾಲಕರಾಗಿದ್ದು, ನಗರದಿಂದ ತನ್ನೀರು ಬಾವಿ ಬೀಚ್‌ಗೆ ಬಾಡಿಗೆ ಹೋಗಿದ್ದು. ಅಲ್ಲಿ ಪ್ರಯಾಣಿಕರನ್ನು ಬಿಟ್ಟು ಬೇರೆ ಪ್ರಯಾಣಿಕರನ್ನು ಹತ್ತಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅದೇ ರಿಕ್ಷಾ ಪಾರ್ಕ್‌ನಲ್ಲಿ ಬಾಡಿಗೆ ಮಾಡುತ್ತಿದ್ದ ನಾಲ್ವರು ರಿಕ್ಷಾ ಚಾಲಕರು ಮಂಗಳೂರು ನಗರದ ರಿಕ್ಷಾ ಇಲ್ಲಿ ಬಾಡಿಗೆ ಮಾಡಬಾರದೆಂದು ಆಕ್ಷೇಪಿಸಿದರೆನ್ನಲಾಗಿದೆ. ಈ ವಿಚಾರವಾಗಿ ವಾಗ್ವಾದ ನಡೆದಾಗ ನಾಲ್ವರು ಆರೋಪಿಗಳ ಪೈಕಿ ಓರ್ವ ಅರಾಫತ್‌ಗೆ ಚೂರಿ ಇರಿದಿದ್ದಾನೆ ಎಂದು ದೂರಲಾಗಿದೆ. ಇದರಿಂದ ಅರಾಫತ್ ಕೈಗೆ ಗಾಯಗಳಾಗಿದ್ದು, ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories