ಮಂಗಳೂರು | ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋದ ಮೂವರು ಯುವಕರು

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.

ನಾಪತ್ತೆಯಾದವರು ಮಿಲನ್ (20), ಲಿಖಿತ್ (18), ಮತ್ತು ನಾಗರಾಜ್ (24) ಎಂದು ಗುರುತಿಸಲಾಗಿದೆ.

ವರದಿಗಳ ಪ್ರಕಾರ, ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಲಿಖಿತ್ ಕೈಕಂಬದ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ, ನಾಗರಾಜ್ ಬೈಕಂಪಾಡಿಯಲ್ಲಿರುವ ಕಂಪನಿ ಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರು.
ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

Latest Indian news

Popular Stories