ಮಂಗಳೂರು: ನಿಷೇಧಿತ ಮಾದಕ ವಸ್ತ ಕೊಕೈನ್ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ 35 ಗ್ರಾಂ ಕೊಕೈನನ್ನು ವಶಪಡಿಸಿಕೊಂಡಿದ್ದಾರೆ.
ಅಂಬ್ಲಮೊಗರಿನ ಶಾನವಾಝ್, ಮುಹಮ್ಮದ್ ಅಶ್ಫಾಕ್ ಬಂಧಿತ ಆರೋಪಿಗಳು.
ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾರಾಟಕ್ಕಾಗಿ ಈ ಕೊಕೈನನ್ನು ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ವಶದಲ್ಲಿದ್ದ KA- 19-HL-2021 ನೇ ಹೊಂಡಾ ಅಕ್ಟಿವಾ ಸ್ಕೂಟರ್ ನೇದನ್ನು ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ ರೂ. 2,72,000/- ರೂ ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೋಕೆನ್, 3 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು ರೂ. 5560/-ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000/- ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.