ಮಂಗಳೂರು | ಫಲ್ಗುಣಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಮಂಗಳೂರು, ಫೆ.3: ಯುವಕನೊಬ್ಬ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಫೆಬ್ರವರಿ 2ರ ಶುಕ್ರವಾರ ಸಂಜೆ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಮಳಲಿ ಮಟ್ಟಿ ತಿಮ್ಮೋಟ್ಟು ನಿವಾಸಿ ಚೇತನ್ ಪೂಜಾರಿ (28) ಎಂದು ಗುರುತಿಸಲಾಗಿದೆ.

ಘಟನೆಯ ಎರಡು ದಿನಗಳ ಮೊದಲು, ಅವರು ತಮ್ಮ ಸ್ಕೂಟರ್ ಅನ್ನು ಗುರ್ಪುರ್ ಸೇತುವೆಯ ಮೇಲೆ ನಿಲ್ಲಿಸಿದ್ದರು.

ಶುಕ್ರವಾರ ಸಂಜೆ ಸೇತುವೆ ಮೇಲೆ ಸ್ಕೂಟರ್ ಇರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಆಗಮಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ರೀತಿಯ ತೊಂದರೆಗೆ ಒಳಗಾಗಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯವನ್ನು ಪಡೆಯಿರಿ. ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 9152987821. 

 

Latest Indian news

Popular Stories