ಮಂಗಳೂರು: ಪಾರ್ಕಿಂಗ್ ವೇಳೆ ವೈದ್ಯರೊಬ್ಬರ ಕಾರು ಹೊತ್ತಿ ಉರಿದಿದ್ದು, ವೈದ್ಯೆ ಅಪಾಯದಿಂದ ಪಾರಾದ ಘಟನೆ ನಗರದ ಕೆ.ಎಸ್.ರಾವ್ ರಸ್ತೆಯ ಸಿಟಿ ಸೆಂಟರ್ ಮಾಲ್ ಬಳಿ ಸೋಮವಾರ ನಡೆದಿದೆ.
ವೈದ್ಯೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿಕೊಂಡು ಬಂದು ಅಪಾರ್ಟ್‌ಮೆಂಟ್ ಬಳಿ ತಂದು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅವರು ಕಾರಿನಿಂದ ಇಳಿದಿದ್ದಾರೆ. ಅಷ್ಟರಲ್ಲಾಗಲೇ ಕಾರಿನ ಮುಂಭಾಗ ಸುಟ್ಟು ಉರಿದು ಹೋಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕಾರು ಬೆಂಕಿಗಾಹುತಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕಾಮಿಸಿ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ.