ಮಂಗಳೂರು: ಜ್ಯುವೆಲ್ಲರಿ ಅಂಗಡಿ ಮಾಲಕ ಆತ್ಮಹತ್ಯೆ

ಮಂಗಳೂರು, ಜು.20: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಾಮನಗರದಲ್ಲಿ ಚಿನ್ನಾಭರಣ ಅಂಗಡಿ ಮಾಲೀಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ಮೃತರನ್ನು ಕಿನ್ನಿಗೋಳಿ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62) ಎಂದು ಗುರುತಿಸಲಾಗಿದೆ.

ಉಮೇಶ್ ಒಂದು ವಿಚಾರವಾಗಿ ಮಾನಸಿಕವಾಗಿ ನೊಂದಿದ್ದರು. ಇದೇ ಕಾರಣಕ್ಕೆ ಅವರು ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ ಎನ್ನಲಾಗಿದೆ.

ಕಿನ್ನಿಗೋಳಿ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಗೌರವಾಧ್ಯಕ್ಷರಾಗಿದ್ದರು. ಅವರು ಪತ್ನಿಯನ್ನು ಅಗಲಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ರೀತಿಯ ತೊಂದರೆಗೆ ಒಳಗಾಗಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯವನ್ನು ಪಡೆಯಿರಿ. ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 9152987821.

Latest Indian news

Popular Stories