ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಮಂಗಳೂರು: ರಾಜ್ಯ ಸರಕಾರ ಇಂಧನ‌ದ ಮೇಲಿನ ತೆರಿಗೆ ಹೆಚ್ಚಿಸಿರುವುದನ್ನು ವಿರೋಧಿಸಿ‌ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದಿಂದ ಮಂಗಳೂರು ನಗರ, ಬಂಟ್ವಾಳ, ಸುರತ್ಕಲ್ ಸಹಿತ ವಿವಿಧ ತಾಲೂಕುಗಳಲ್ಲಿ ಪ್ರತಿಭಟನೆ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಯಂತೆ ರಾಜ್ಯಾದ್ಯಂತ ಎರಡನೇ ಹಂತದ ಪ್ರತಿಭಟನೆ ಇದಾಗಿದ್ದು, ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

ಮಂಗಳೂರು ನಗರದ ಪಿವಿಎಸ್ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಮತ್ತಿತರ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ಸುರತ್ಕಲ್ ನಲ್ಲಿ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ರಸ್ತೆ ತಡೆ ನಡೆಸಲಾಯಿತು.

Latest Indian news

Popular Stories