ಮಂಗಳೂರು:ರಸ್ತೆಯಲ್ಲಿ ನಮಾಝ್ ಪ್ರಕರಣ | ಕೇಸ್ ರದ್ದು?

ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂ ಪೇರಿತ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ ಎಂಬ ಮಾಹಿತಿ ಇದೆ. ಆದರೆ ಇದುವರೆಗೆ ಅಧಿಕೃತವಾಗಿ ಧೃಡೀಕರಿಸಿಲ್ಲ.

ಕಳೆದ ಶುಕ್ರವಾರ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ನಮಾಝ್ ನಿರ್ವಹಿಸಿರುವ ವೀಡಿಯೋ ವೈರಲ್ ಆಗಿತ್ತು. ನಮಾಝ್ ನಿರ್ವಹಿಸಿದ್ದಕ್ಕೆ ಸಂಘಪರಿವಾರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೆ ಪೊಲೀಸರು ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದರು.

ಪೊಲೀಸರ ಕ್ರಮಕ್ಕೆ ಮುಸ್ಲಿಮ್ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು. ನಿನ್ನೆ ಮುಸ್ಲಿಮ್ ನಾಯಕರ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಕೇಸ್ ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು.

Latest Indian news

Popular Stories