ಮಂಗಳೂರು: ಬೈಕ್‌ನಲ್ಲಿ ಹೋಗುತ್ತಿದ್ದ ಜೋಡಿಗೆ ತಡೆ; ಪ್ರಕರಣ ದಾಖಲು

ಮಂಗಳೂರು: ಬೈಕಿನಲ್ಲಿ‌ ಸಂಚರಿಸುತ್ತಿದ್ದ ಭಿನ್ನ ಧರ್ಮದ ಸಹೋದ್ಯೋಗಿಗಳನ್ನು ಬೈಕ್‌ನಲ್ಲಿ ಬಂದ ಇಬ್ಬರು ತಡೆದು ನಿಲ್ಲಿಸಿದ ಘಟನೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಿನ್ನ ಧರ್ಮದ ಯುವಕ ಮತ್ತು ಯುವತಿ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಾಗ್ರೀಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜ ದ ಕಡೆಗೆ ಬೈಕ್ ನಲ್ಲಿ ಹೊರಟಿದ್ದರು. ಈ ವೇಳೆ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಇಬ್ಬರು ಅಪರಿಚಿತರು ಅವರನ್ನು ತಡೆದು ನೀವು ಹಿಂದೂ ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಷ್ಟರಲ್ಲಿ ಹೊಯ್ಸಳ ವಾಹನ ಅಲ್ಲಿಗೆ ಬಂದಿದ್ದು, ಇಬ್ಬರನ್ನು ರಕ್ಷಣೆ ಮಾಡಿ ಠಾಣೆಗೆ ಕರೆತಂದಿದ್ದಾರೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Latest Indian news

Popular Stories