ಮಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿಯವರನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ತಾಣಗಳಲ್ಲಿ ವೀಡಿಯೋ ಹರಿಬಿಟ್ಟ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಒಬ್ಬ ಯುವಕನನ್ನು ಬಂಧಿಸಿದ್ದಾರೆ.
ಶಿರಸಿ ಮೂಲದ ಕಳೆದ 12 ವರ್ಷಗಳಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿರುವ ಅನಿಲ್ ಕುಮಾರ್(34) ಬಂಧಿತ ಆರೋಪಿ.
ಆರೋಪಿ ಅನಿಲ್ ಕುಮಾರ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ನಿಂದಿಸಿ ವೀಡಿಯೋ ಮಾಡಿದ್ದ. ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಎನ್ಎಸ್ ಯುಐ ದ.ಕ.ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಈತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಸುರತ್ಕಲ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.