ಮಂಗಳೂರು | ಎಂಡಿಎಮ್ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿ ಬಂಧನ

ಮಂಗಳೂರು: ನಗರದ ಬೆಂದೂರ್‌ವೆಲ್‌ ಪರಿಸರದಲ್ಲಿ ನಿಷೇಧಿತ ಡ್ರಗ್ಸ್‌ ಎಂಡಿಎಂಎನ್ನು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಸುಳ್ಯ ಅಜ್ಜಾವರದ ನಿವಾಸಿ, ನಗರದ ಕಾಲೇಜೊಂದರ ವಿದ್ಯಾರ್ಥಿ ಲುಕುಮಾನುಲ್‌ ಹಕೀಂ(22)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ವಶದಿಂದ 1.25 ಲಕ್ಷ ರೂ. ಮೌಲ್ಯದ 25 ಗ್ರಾಂ ಎಂಡಿಎಂಎ, ಮೊಬೈಲ್‌ ಪೋನ್‌, ಡಿಜಿಟಲ್‌ ತೂಕ ಮಾಪನ ಸಹಿತ ಒಟ್ಟು 1.60 ಲ.ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

Latest Indian news

Popular Stories