ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ 6 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಮಂಜೇಶ್ವರ ಸಮೀಪದ ಮಚ್ಚಂಪಾಡಿಯ ನವಾಝ್ (40) ಮತ್ತು ಪುದು ಗ್ರಾಮದ ಫರಂಗಿಪೇಟೆಯ ಅಜರುದ್ದೀನ್ ಯಾನೆ ಅಜರ್ (38) ಬಂಧಿತ ಆರೋಪಿಗಳು.

ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇವರು ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ 120 ಗ್ರಾಂ ತೂಕದ 6 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೂರು ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ, ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಒಟ್ಟು 6,83,120 ರೂಪಾಯಿ ಮೌಲ್ಯ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Latest Indian news

Popular Stories