ಮಂಗಳೂರು: ನಗರದ ಅತ್ತಾವರ ವಿಭಾಗದ ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಅವರ ಮನೆ ಹಾಗೂ ಕಚೇರಿಗೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆದಾಯ ಮೀರಿ ಅಸ್ತಿ ಗಳಿಕೆ ಆರೋಪದಡಿ ದಾಳಿ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ನಗರದ ದೇರೆಬೈಲ್ ಕೊಂಚಾಡಿಯಲ್ಲಿರುವ ಶಿವಪ್ರಸಾದ್ ಗೋಲ್ಡ್ ಅಪಾರ್ಟ್ಮೆಂಟ್ ನಲ್ಲಿರುವ ಮನೆ, ಕಚೇರಿಗೆ ಅಧಿಕರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಶಾಂತಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆದಿದೆ. ಕಳೆದ ಐದಾರು ವರ್ಷಗಳಿಂದ ಮಂಗಳೂರಿನಲ್ಲಿ ಶಾಂತಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.