Dakshina KannadaFeatured Story

ಮಂಗಳೂರು : ಫ್ಲ್ಯಾಟ್‌ನೊಳಗೆ ಸಿಲುಕಿದ ಮೂರು ವರ್ಷದ ಮಗು: ಅಗ್ನಿಶಾಮಕ ದಳದಿಂದ ರಕ್ಷಣೆ

ಮಂಗಳೂರು: ಫ್ಲ್ಯಾಟ್‌ನೊಳಗೆ ಆಟವಾಡುತ್ತಿದ್ದ ಮೂರು ವರ್ಷದ ಮಗು ಅಚಾನಕ್ ಚಿಲಕ ಹಾಕಿದ ಪರಿಣಾಮ‌ ಮನೆಯೊಳಗೆ ಬಾಕಿಯಾದ ಘಟನೆ ನಗರದ ಕೊಡಿಯಾಲ್ ಗುತ್ತಿನಲ್ಲಿ ನಡೆದಿದೆ.

ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಅಪಾರ್‌ಮೆಂಟ್‌ನ ನಾಲ್ಕನೇ ಮಹಡಿಯಲ್ಲಿದ್ದ ಫ್ಲ್ಯಾಟ್‌ನ ಕೋಣೆಯೊಳಗೆ ಇದ್ದ ಮಗು ಆಟವಾಡುತ್ತಾ ಬಾಗಿಲಿನ ಚಿಲಕ ಹಾಕಿತ್ತು. ಹೊರಗಿದ್ದವರಿಗೆ ಅದನ್ನು ತೆಗೆಯಲು ಸಾಧ್ಯವಾಗಿರಲಿಲ್ಲ. ಬಳಿಕ ಮಾಹಿತಿ ಪಡೆದ ಪಾಂಡೇಶ್ವರ ಠಾಣೆಯ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ನಡೆಸಿದರು.

ಅಪಾರ್ಟ್ ಮೆಂಟ್ ನ ಮೇಲ್ಬಾಗದಿಂದ ಹಗ್ಗದ ಸಹಾಯದಿಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೇಲಿನಿಂದ ಇಳಿದು ಮಗುವಿದ್ದ ಕೋಣೆಯೊಳಗೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button