Dakshina KannadaFeatured Story

ಮೂಡಬಿದರೆಯಲ್ಲಿ ಕೈ-ಕಮಲ ಕಾರ್ಯಕರ್ತರ ನಡುವೆ ಸಂಘರ್ಷ

ಮಂಗಳೂರು: ಮೂಡುಶೆಡ್ಡೆಯಲ್ಲಿ ಚುಣಾವಣೋತ್ತರ ಘರ್ಷಣೆ ಬುಧವಾರ ಸಂಜೆ ನಡೆದಿದೆ. ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಕಾರು ಹಾದು ಹೋಗುವಾಗ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೂ ಘೋಷಣೆ ಹಾಕಿದ್ದಾರೆ.

ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button