Dakshina KannadaCrime

ಮಂಗಳೂರು | ಅನೈತಿಕ ಪೊಲೀಸ್ ಗಿರಿ ಪ್ರಕರಣ: ಇಬ್ಬರ ಬಂಧನ

ಮಂಗಳೂರು: ಬೈಕಿನಲ್ಲಿ‌ ಸಂಚರಿಸುತ್ತಿದ್ದ ಭಿನ್ನ ಧರ್ಮದ ಸಹೋದ್ಯೋಗಿಗಳನ್ನು ಬೈಕ್‌ನಲ್ಲಿ ಬಂದ ಇಬ್ಬರು ತಡೆದು ನಿಲ್ಲಿಸಿದ ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಬಂಧಿತರು.

ಇವರಿಬ್ಬರು ಸೋಮವಾರ ರಾತ್ರಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಭಿನ್ನಧರ್ಮದ ಜೋಡಿಯನ್ನು ಹಿಂಬಾಲಿಸಿ ತಡೆದು ನಿಲ್ಲಿಸಿ ನಿಂದಿಸಿದ್ದರು. ಈ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆಯ ಹಿನ್ನೆಲೆ: ಭಿನ್ನ ಧರ್ಮದ ಯುವಕ ಮತ್ತು ಯುವತಿ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಾಗ್ರೀಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜ ದ ಕಡೆಗೆ ಬೈಕ್ ನಲ್ಲಿ ಹೊರಟಿದ್ದರು. ಈ ವೇಳೆ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಇಬ್ಬರು ಅಪರಿಚಿತರು ಅವರನ್ನು ತಡೆದು ನೀವು ಹಿಂದೂ ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಷ್ಟರಲ್ಲಿ ಹೊಯ್ಸಳ ವಾಹನ ಅಲ್ಲಿಗೆ ಬಂದಿದ್ದು, ಇಬ್ಬರನ್ನು ರಕ್ಷಣೆ ಮಾಡಿ ಠಾಣೆಗೆ ಕರೆತಂದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button