ಚುನಾವಣೆ ಸೋಲಿನ ಬೆನ್ನಲ್ಲೇ ರಾಜಿನಾಮೆ ನೀಡಿದ್ದೆ; ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ

ಬಳ್ಳಾರಿ: 2023ರ ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ್ದೇನೆ. ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಚುನಾವಣೆಯ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಈಗಾಗಲೇ ರಾಜೀನಾಮೆ ಪತ್ರವನ್ನು ಲಿಖಿತವಾಗಿಯೂ ಕಳಿಸಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಅಕ್ಕಿ ನಿರಾಕರಣೆ ಕುರಿತು ಮಾತನಾಡಿದ ಕಟೀಲ್, ‘ಕೇಂದ್ರದಲ್ಲಿ ಕಳೆದ ಒಂಭತ್ತು ವರ್ಷ ಭ್ರಷ್ಟಾಚಾರ ರಹಿತ ಸರ್ಕಾರ ನೀಡಿದ್ದೇವೆ. ಭಯೋತ್ಪಾದನಾ ಚಟುವಟಿಕೆ ಶೇ 80 ಕಡಿಮೆ ಆಗಿದೆ, ನಕ್ಸಲ್ ಹಾಗೂ ಆತಂಕವಾದ ನಿರ್ಮೂಲನೆ ಮಾಡಿದ್ದು, ಕೇಂದ್ರ ಸರ್ಕಾರದ ನಿರಂತರವಾಗಿ 5 ಕೆಜಿ ಅಕ್ಕಿ ಕೊಡುತ್ತದೆ. ದೇಶದ ಎಲ್ಲಾ ರಾಜ್ಯಗಳಿಗೆ ಅಕ್ಕಿ ಕೊಡುತ್ತದೆ. ಬರ ಮತ್ತು ನೆರೆ ಬಂದಾಗ ವಿತರಿಸಲು ಕೇಂದ್ರ ಅಕ್ಕಿ ಸಂಗ್ರಹ ಮಾಡುತ್ತದೆ ಎಂದು ಹೇಳಿದರು.

Latest Indian news

Popular Stories