Dakshina Kannada

ನವೆಂಬರ್ 8 : “ಪ್ರವಾದಿ ಮುಹಮ್ಮದ್(ಸ) ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲುಗಳು” ಸಾರ್ವಜನಿಕ ಸಮಾವೇಶ

ಮಂಗಳೂರು: ಪ್ರವಾದಿ ಮುಹಮ್ಮದ್ ರವರು ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲುಗಳು ಎಂಬ ಧ್ಯೇಯದೊಂದಿಗೆ ನವಂಬರ್ 8 ಶುಕ್ರವಾರ ಸಂಜೆ 6:40ಕ್ಕೆ ಮಂಗಳೂರಿನ ಪುರಭವನದಲ್ಲಿ ಸಾರ್ವಜನಿಕ ಸಮಾವೇಶವನ್ನು ಆಯೋಜಿಸಲಾಗಿದೆ.

ಇವತ್ತಿನ ಸಮಾಜದಲ್ಲಿ ಮೌಲ್ಯಾಧಾರಿತ ಸಮಾಜದ ರಚನೆಗೆ ಎದುರಾಗುತ್ತಿರುವ ಸವಾಲುಗಳೇನು ಎಂಬುದರ ವಿಶ್ಲೇಷಣೆಯು ಈ ಸಮಾವೇಶದಲ್ಲಿ ನಡೆಯಲಿದೆ. ಸಾಮಾಜಿಕ ಮೌಲ್ಯಗಳು ಮತ್ತು ತತ್ವಗಳನ್ನು ಚರ್ಚೆಗೊಡ್ಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂಥದೊಂದು ಕಾರ್ಯಕ್ರಮದ ಮಾಹಿತಿಯನ್ನ ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ
ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ನಗರ ಅಧ್ಯಕ್ಷ ಇಸಾಕ್ ಪುತ್ತೂರು ನೀಡಿದ್ದಾರೆ.


ಈ ಕಾರ್ಯಕ್ರಮದಲ್ಲಿ ಭಾರತೀಯ ಪ್ರಾದೇಶಿಕ ಸೇನೆಯ ಲೆಫ್ಟಿನೆಂಟ್ ಭವ್ಯ ನರಸಿಂಹಮೂರ್ತಿ, ಸಾಮಾಜಿಕ ಚಿಂತಕ ನ್ಯಾಯವಾದಿ ಸುಧೀರ್ ಕುಮಾರ್ ಮುರೋಳ್ಳಿ, ವಾರ್ತಾಭಾರತಿ ದೈನಿಕದ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಭಾಗವಹಿಸಿ ಮಾತನಾಡಲಿದ್ದಾರೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button