ಹೃದಯಾಘಾತಕ್ಕೆ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

ಲೋ ಬಿಪಿಯಿಂದ ಹೃದಯಾಘಾತವಾಗಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.

ಸುಮಾ(19) ಮೃತ ವಿದ್ಯಾರ್ಥಿನಿ.

ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದಳು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮತ್ತೆ ಆ.11 ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ರು. ಆದ್ರೆ ಆ.13 ರ ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Latest Indian news

Popular Stories