ಶಾಸಕರ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ವಿರೋಧ: ಮಂಗಳೂರಲ್ಲಿ ಪ್ರತಿಭಟನೆ ನಡೆಸಿದ ಬಜರಂಗದಳ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ನಡೆದ ವಿವಾದದ ಬಳಿಕ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮತ್ತಿತರ ಮುಖಂಡರ ವಿರುದ್ಧ ದೂರು ದಾಖಲಾಗಿರುವುದನ್ನು ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ವಿಎಚ್‌ಪಿ ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಬಳಿಕ ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಆಕ್ರೋಶಿತ ಪ್ರತಿಭಟನಕಾರರು ಬ್ಯಾರಿಕೇಡ್ ಅನ್ನು ತಳ್ಳಿ ಮುಂದೆ ಹೋಗಲು ಯತ್ನಿಸಿದ್ದಾರೆ. ಆಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ನಡೆದಿದೆ. ರಸ್ತೆಗೆ ಬಿದ್ದವರನ್ನು ಪೊಲೀಸರು ಬಲವಂತವಾಗಿ ಪೊಲೀಸ್ ವ್ಯಾನ್ ಗೆ ಎತ್ತಿ ಹಾಕಿದ್ದಾರೆ. ವಶಕ್ಕೆ ತೆಗೆದುಕೊಂಡ ಹಿಂದೂ ಕಾರ್ಯಕರ್ತರನ್ನು ನಾಲ್ಕು ಪೊಲೀಸ್ ವ್ಯಾನ್ ಗಳು, ಮೂರ್ನಾಲ್ಕು ಪೊಲೀಸ್ ಜೀಪ್ ಗಳಲ್ಲಿ ಕೊಂಡೊಯ್ದಿದ್ದಾರೆ. ಉಳಿದ ಕಾರ್ಯಕರ್ತರನ್ನು ಪೊಲೀಸರು ಮನೆಗೆ ಕಳುಹಿಸಿದ್ದಾರೆ.

Latest Indian news

Popular Stories