Dakshina Kannada

ಬಿಜೆಪಿಯಿಂದ ರಾಜ್ಯ ಸರಕಾರದ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸುವ ಪ್ರಯತ್ನ: ರಮನಾಥ ರೈ

ಮಂಗಳೂರು: ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದೆ. ಬಡವರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ ಈ ನಡುವೆ ಸರಕಾರದ ವಿರುದ್ಧ ಕೆಟ್ಟ ಅಭುಪ್ರಾಯ ಮೂಡಿಸುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದು ಮಾಜಿ ಸಚಿವ ರಮನಾಥ ರೈ ಹೇಳಿದರು.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಕೂಡಾ ಸರಕಾರ ಪತನವಾಗುತ್ತದೆ ಎಂದು ಹೇಳುತ್ತಿದ್ದಾರೆ. ಆದರೆ ಸರಕಾರ ಸುಭದ್ರವಾಗಿರಲಿದೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರಕಾರ ಬಡವರ, ರೈತರ ಪರವಾಗಿದೆ. ಈ ಹಿಂದಿನಿಂದಲೂ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ರೈತರ, ಬಡವರ ಪರ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಅವರು ಹೇಳಿದರು.

ಗೃಹಲಕ್ಷ್ಮೀ ಯಶಸ್ವಿ ಕಾರ್ಯಕ್ರಮ. ಇದರಲ್ಲನ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದು ರಮಾನಾಥ ರೈ ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button