Dakshina KannadaFeatured Story

ಕರಾವಳಿ ಜಿಲ್ಲೆಗಳಲ್ಲಿ ರವಿವಾರದಿಂದ ರಮ್ಜಾನ್ ಉಪವಾಸ ಆರಂಭ

ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರವಿವಾರದಿಂದ ಪವಿತ್ರ ರಮ್ಜಾನ್ ವ್ರತ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮತ್ತು ಉಳ್ಳಾಲ ಖಾಝಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರು ಈ ಘೋಷಣೆ ಮಾಡಿದ್ದಾರೆ.

ಮುಸ್ಲಿಂ ಬಾಂಧವರು ಒಂದು ತಿಂಗಳ ಕಾಲ ಈ ಪವಿತ್ರ ವ್ರತವನ್ನು ಆಚರಿಸಲಿದ್ದಾರೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅನ್ನ, ನೀರು ತ್ಯಜಿಸಿ ಉಪವಾಸ ಆಚರಿಸುವುದು ರಮ್ಜಾನ್‌ನ ವಿಶೇಷ. ಈ ತಿಂಗಳಲ್ಲಿ ಪ್ರಾರ್ಥನೆ, ದಾನ-ಧರ್ಮಗಳಿಗೆ ವಿಶೇಷ ಮಹತ್ವವಿದೆ.

ರಮ್ಜಾನ್ ಪ್ರಯುಕ್ತ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button