ಮಂಗಳೂರು: ತನ್ನ ಮೇಲೆ ಬೆಂಗಳೂರಿನ ಹೊಟೇಲೊಂದರಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಮಹಿಳೆಯೋರ್ವಳು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಪೈ ವಿಸ್ತಾ ಹೋಟೆಲ್‌ನಲ್ಲಿ 2023ರ ಜೂನ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ರವಿವಾರ ಮಹಿಳೆ ದೂರು ನೀಡಿದ್ದಾರೆ. ಅಲ್ಲದೆ ದೌರ್ಜನ್ಯ ಎಸಗಿರುವ ಸಂದರ್ಭದ ಫೋಟೊ, ಸೆಲ್ಫಿ, ವಿಡಿಯೋ ಇಟ್ಟುಕೊಂಡು ಅವರು ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.