ನೀಟ್ ಅಕ್ರಮ: ಎಸ್.ಐ.ಓ ಪ್ರತಿಭಟನೆ

ತೊಕ್ಕೊಟ್ಟು: ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್ ಐ ಓ ಉಳ್ಳಾಲ ಶಾಖೆಯ ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಹಾಗೂ ಈ ಅವ್ಯವಹಾರಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NTA)ದ ಪಾತ್ರದ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಎಸ್ಐಓ ದ.ಕ ಜಿಲ್ಲಾಧ್ಯಕ್ಷ ಆಸಿಫ್ ಡಿ.ಕೆ, ಮಂಗಳೂರು ಕೇಂದ್ರ ಶಾಖಾಧ್ಯಕ್ಷ ಫಿರಾಸ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.

Latest Indian news

Popular Stories