ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕರ್ನಾಟಕ ವಿಧಾನಸಭೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.

ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾಗೀರಥಿ ಅವರ ನೇಮಕದ ಆದೇಶಕ್ಕೆ ಸಹಿ ಹಾಕಿದ್ದಾರೆ.

ರೂಪಕಲಾ ಎಂ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಸಮಿತಿಗೆ 15 ವಿಧಾನಸಭಾ ಸದಸ್ಯರು ಮತ್ತು 5 ವಿಧಾನ ಪರಿಷತ್ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ.

Latest Indian news

Popular Stories